ಮಂಜೇಶ್ವರ:
ವಿಧಾನಸಭಾ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ಮಂಗಳವಾರ ಸಂಜೆ 6 ಗಂಟೆಗೆ ಅಧಿಕೃತವಾಗಿ ತೆರೆ ಬಿದ್ದಿದೆ. ಇದರೊಂದಿಗೆ ಮಂಜೇಶ್ವರ ಕ್ಷೇತ್ರದಲ್ಲಿ ಕಳೆದ ಕೆಲವು ದಿನಗಳಿಂದ ಜೋರಾಗಿ ನಡೆದ ರೋಡ್ ಶೋಗಳು, ಸಾರ್ವಜನಿಕ ಸಭೆಗಳು ಹಾಗೂ ಮೈಕ್ ಅನೌನ್ಸ್‌ಮೆಂಟ್‌ಗಳು ಅಂತ್ಯಗೊಂಡಿವೆ.
ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಿಸಿರುವ ಯುಡಿಎಫ್, ಎಲ್‌ಡಿಎಫ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಮಂಗಳವಾರ ಬೆಳಿಗ್ಗೆಯಿಂದಲೇ ಮತದಾರರನ್ನು ಸೆಳೆಯಲು ಅಂತಿಮ ಕಸರತ್ತು ನಡೆಸಿದರು.
ಪ್ರಮುಖ ನಾಯಕರು ಮತ್ತು ಕಾರ್ಯಕರ್ತರ ದಂಡಿನೊಂದಿಗೆ ನಡೆದ ಈ ಅಂತಿಮ ಹಂತದ ಪ್ರಚಾರದಲ್ಲಿ ಅಭ್ಯರ್ಥಿಗಳು ತಮ್ಮ ಶಕ್ತಿ ಪ್ರದರ್ಶಿಸಿದರು. ಚುನಾವಣೆಯ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ.