ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ಶೈಕ್ಷಣಿಕ ಕ್ರಾಂತಿ: ಹೊಸ ಸೌಲಭ್ಯಗಳಿಗೆ ಚಾಲನೆ

ಮಂಜೇಶ್ವರ : ಗಡಿನಾಡಿನ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿರುವ ಪೀಸ್ ಕ್ರಿಯೇಟಿವ್ ಶಾಲೆ, 2026-27ನೇ ಶೈಕ್ಷಣಿಕ ಸಾಲಿನಲ್ಲಿ ಅಭೂತಪೂರ್ವ ಬದಲಾವಣೆಗೆ ಸಾಕ್ಷಿಯಾಗುತ್ತಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡಿರುವ ಶಾಲಾ ಆಡಳಿತ ಮಂಡಳಿಯು, ಲೌಕಿಕ ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಂಸ್ಕಾರಯುತ ಶಿಕ್ಷಣಕ್ಕೆ ಭರ್ಜರಿ ತಯಾರಿಗೆ ಚಾಲನೆ ನೀಡಿದೆ.

ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಕ್ರೀಡಾಸಕ್ತಿಗೆ ರೆಕ್ಕೆ ನೀಡುವ ಉದ್ದೇಶದಿಂದ ಶಾಲಾ ಆವರಣದಲ್ಲಿ ಅತ್ಯುತ್ತಮ ಮಟ್ಟದ ಫುಟ್ಬಾಲ್ ಟರ್ಫ್, ಬಾಸ್ಕೆಟ್ ಬಾಲ್, ವಾಲಿಬಾಲ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಬೇಕಾದ ಅಂತರಾಷ್ಟ್ರೀಯ ಗುಣಮಟ್ಟದ ಸೌಕರ್ಯಗಳ ಕಾಮಗಾರಿಗೆ ಅಧಿಕೃತ ಚಾಲನೆ ದೊರೆತಿದೆ.ಗಡಿನಾಡಿನ ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆಯಾಗಿದೆ.

ಕೇವಲ ಪಠ್ಯಕ್ಕೆ ಸೀಮಿತವಾಗದ ಈ ಸಂಸ್ಥೆಯು, ಲೌಕಿಕ ವಿದ್ಯಾಭ್ಯಾಸದ ಜೊತೆಗೆ ಇಸ್ಲಾಮಿಕ್ ಪಠಣಕ್ಕೂ ಹೆಚ್ಚಿನ ಒತ್ತು ನೀಡುತ್ತಿದೆ. ವಿಶೇಷವಾಗಿ ಮಕ್ಕಳು ಕುರ್‌ಆನ್ ಕಂಠಪಾಠ ಮಾಡಿ ‘ಹಾಫಿಝ್’ ಬಿರುದು ಪಡೆಯಲು ಇಲ್ಲಿ ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಆಧುನಿಕ ಜ್ಞಾನದ ಜೊತೆಗೆ ಧಾರ್ಮಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಇದು ಪೂರಕವಾಗಿದೆ.

ಪೀಸ್ ಕ್ರಿಯೇಟಿವ್ ಶಾಲೆಯ ಮುಕುಟಕ್ಕೆ ಮತ್ತೊಂದು ಗರಿ ಎಂಬಂತೆ, 2026 – 27 ನೇ ಶೈಕ್ಷಣಿಕ ವರ್ಷದಿಂದ ಸಿಬಿಎಸ್ಇ ಪಠ್ಯಕ್ರಮದ ಅಡಿಯಲ್ಲಿ 10ನೇ ತರಗತಿಯು ಆರಂಭಗೊಳ್ಳಲಿದೆ. ಇದರೊಂದಿಗೆ ಸುಸಜ್ಜಿತವಾದ ಕಿಂಡರ್ ಗಾರ್ಡನ್ ವಿಭಾಗವು ಪುಟ್ಟ ಮಕ್ಕಳ ಕಲಿಕೆಗೆ ಹೊಸ ಮೆರುಗನ್ನು ನೀಡಲಿದೆ.

​ಒಟ್ಟಾರೆಯಾಗಿ, ಸುಸಜ್ಜಿತ ಕಟ್ಟಡ, ನುರಿತ ಶಿಕ್ಷಕ ವೃಂದ ಹಾಗೂ ಆಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಪೀಸ್ ಕ್ರಿಯೇಟಿವ್ ಶಾಲೆಯು ಗಡಿನಾಡಿನಲ್ಲಿ ಶೈಕ್ಷಣಿಕ ಕ್ರಾಂತಿಯ ಹೊಸ ಪರ್ವವನ್ನು ಆರಂಭಿಸಿದೆ. ಈಗಾಗಲೇ ದಾಖಲಾತಿ ಆರಂಭಗೊಂಡಿದ್ದು ಆಸಕ್ತಿ ಇರುವ ಪೋಷಕರು ಕೂಡಲೇ ತಮ್ಮ ಮಕ್ಕಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9446076660 ಸಂಖ್ಯೆ ಸಂಪರ್ಕಿಸಬಹುದಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!