ಕನ್ನಡ ಭವನ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ವಸಂತ್ ಕೆರೆಮನೆ ಅವರಿಗೆ ವಿಶೇಷ ಗೌರವ ಸಲ್ಲಿಸುವ “ಹತ್ತನೇ ಸವಿ ಸಂಭ್ರಮ” ಕಾರ್ಯಕ್ರಮ ಇಂದು ಸಂಜೆ ಬೇಕಲ್ ಬೀಚ್‌ನಲ್ಲಿ ನಡೆಯಲಿದೆ.
ವಸಂತ್ ಕೆರೆಮನೆ ಅವರು ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಸರಗೋಡು ವೆಸ್ಟ್ ಯೂನಿಟ್ ಅಧ್ಯಕ್ಷರಾಗಿ, ಕೇರಳ–ಕರ್ನಾಟಕ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಹಾಗೂ ಹಲವು ಧಾರ್ಮಿಕ ಕೇಂದ್ರಗಳಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಉತ್ತಮ ಸೇವಾ ಕಾರ್ಯಕರ್ತರಾಗಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಕನ್ನಡ ಭವನದ ಸರ್ವತೋಮುಖ ಅಭಿವೃದ್ಧಿಗೆ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ವಸಂತ್ ಕೆರೆಮನೆ ಮತ್ತು ದಿವ್ಯಶ್ರೀ ದಂಪತಿಗಳಿಗೆ ವಿಶೇಷ ಗೌರವಾರ್ಪಣೆ ನಡೆಯಲಿದೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ Dr. Vaman Rao Bekal ಹಾಗೂ ಗೌರವ ಅಧ್ಯಕ್ಷರಾದ Pradeep Bekal ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಜೆ 5 ಗಂಟೆಗೆ ನಡೆಯುವ ಈ ಕಾರ್ಯಕ್ರಮಕ್ಕೆ ಕನ್ನಡ ಭವನದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.