ಮಂಜೇಶ್ವರ ರೈಲ್ವೆ ನಿಲ್ದಾಣಕ್ಕೆ ಅಭಿವೃದ್ಧಿಯ ಸ್ಪರ್ಶ: ಮೂಲಸೌಕರ್ಯ ವೃದ್ಧಿಗೆ ಡಿಆರ್‌ಎಂ ಮಧುಕರ್ ರಾವ್ ಭರವಸೆ

ಮಂಜೇಶ್ವರ: ಮಂಜೇಶ್ವರ ರೈಲ್ವೆ ನಿಲ್ದಾಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮಧುಕರ್ ರಾವ್ ತಿಳಿಸಿದ್ದಾರೆ.

ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಜನಪ್ರತಿನಿಧಿಗಳು, ಪ್ರಯಾಣಿಕರು ಹಾಗೂ ನಿಲ್ದಾಣ ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ಅವರು, ಹಲವು ಪ್ರಮುಖ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.

ಮಳೆಗಾಲದಲ್ಲಿ ನಿಲ್ದಾಣ ಆವರಣದಲ್ಲಿ ನೀರು ನಿಲ್ಲದಂತೆ ತಡೆಯಲು ಸುಸಜ್ಜಿತ ಚರಂಡಿ ವ್ಯವಸ್ಥೆ ನಿರ್ಮಿಸಲಾಗುವುದು. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಪ್ಲಾಟ್‌ಫಾರ್ಮ್‌ನ ಎರಡೂ ಬದಿಗಳಲ್ಲಿ ಮೇಲ್ಛಾವಣಿ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಲ್ಲದೆ, ನಿಲ್ದಾಣದ ಉತ್ತರ ಭಾಗದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಾಥಮಿಕ ಕ್ರಮಗಳು ಈಗಾಗಲೇ ಆರಂಭಗೊಂಡಿವೆ. ಗೋವಿಂದ ಪೈ ಸರ್ಕಾರಿ ಕಾಲೇಜು ಸ್ಟಾಪ್‌ನಿಂದ ಹೊಸಬೆಟ್ಟು ಕಟ್ಟೆವರೆಗೆ ಆರ್‌.ಒ.ಬಿ (ರೋಡ್ ಓವರ್ ಬ್ರಿಡ್ಜ್) ನಿರ್ಮಾಣ ಸೇರಿದಂತೆ ನಿಲ್ದಾಣದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲಾ ತಂಘಲ್, ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಸೇರಿದಂತೆ ಹಲವು ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!