ಮಂಜೇಶ್ವರ/ಕಾಸರಗೋಡು: ಶ್ರೀಮತ್ ಅನಂತೆಶ್ವರ ದೇವಳದ ಶಾಲೆಗಳ ವತಿಯಿಂದ ಮಂಜೇಶ್ವರದಲ್ಲಿ ಟಿ. ವಿಮಲ ವಿ. ಪೈ ಅವರ ಸವಿನೆನಪಿನಲ್ಲಿ ನಿರ್ಮಿಸಲಾದ ಮೆಮೋರಿಯಲ್ ಎಸ್.ಎ.ಟಿ ಶಾಲೆಯ ಶತಮಾನೋತ್ಸವ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮವು ಮೇ 3, 2026ರ ಆದಿತ್ಯವಾರ ಬೆಳಗ್ಗೆ 10 ಗಂಟೆಗೆ ನೆರವೇರಿತು.
ಶಾಲೆಯ ಹಳೆ ವಿದ್ಯಾರ್ಥಿಯೂ ಟಿ . ವಿ . ಮೋಹನ್ ದಾಸ್ ಪೈ ಅವರ ತಾಯಿಯವಾರದ ಟಿ. ವಿಮಲ ವಿ. ಪೈ ಅವರ ಸವಿನೆನಪಿನಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡವನ್ನು ಶಿಕ್ಷಣಪ್ರೇಮಿ ಟಿ . ವಿ . ಮೋಹನ್ ದಾಸ್ ಪೈ ಅವರು ಉದ್ಘಾಟಿಸಿದರು. ಶತಮಾನೋತ್ಸವದ ಅಂಗವಾಗಿ ನಿರ್ಮಿಸಲಾದ ಹೊಸ ಕಟ್ಟಡವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು.
ಕಾರ್ಯಕ್ರಮದ ಪ್ರಯುಕ್ತ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಅಧ್ಯಾಪಕರಿಗೆ ಸನ್ಮಾನ ಹಾಗೂ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ ಪ್ರದಾನ ಮಾಡಲಾಯಿತು. ಇದೇ ವೇಳೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳ ವೈವಿಧ್ಯಮಯ ಪ್ರತಿಭೆಗಳು ಎಲ್ಲರ ಗಮನ ಸೆಳೆದವು.
ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಸೇರಿದಂತೆ ಅನೇಕರು ಭಾಗವಹಿಸಿ ಶತಮಾನೋತ್ಸವದ ಸಂಭ್ರಮವನ್ನು ಹಂಚಿಕೊಂಡರು.