ಕಾಸರಗೋಡು ಜಿಲ್ಲೆಯ ವರ್ಕಾಡಿ ಸಮೀಪದ ಕುಳಾಯಿ ನದಿಯಿಂದ ಅಕ್ರಮವಾಗಿ ಮರಳು ಕಳವು ಮಾಡಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಚಾಲಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಲಾರಿ ಹಾಗೂ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಪಜೀರ್ ಸಮೀಪದ ವೋಂಡ ಮಜಲ್ ನಿವಾಸಿ ರಾಶಿದ್ (19) ಎಂದು ಗುರುತಿಸಲಾಗಿದೆ.
ಭಾನುವಾರ ಬೆಳಿಗ್ಗೆ ಸುಮಾರು 9.30ರ ವೇಳೆಗೆಕುಳಾಯಿ ಬಯಲು ಪ್ರದೇಶದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಯ ಎಸ್ಐ ಕೆ.ಜಿ. ರತೀಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಎಎಸ್ಐ ಪ್ರದೀಪ್, ಸಿವಿಲ್ ಪೊಲೀಸ್ ಅಧಿಕಾರಿ ಸನಲ್ ಹಾಗೂ ಚಾಲಕ ರಾಜೇಶ್ ಭಾಗವಹಿಸಿದ್ದರು. ಪ್ರಕರಣ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.