ಸೂರಂಬೈಲು ನಿವಾಸಿ,ಮಾಜಿ ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಮಂಜೇಶ್ವರ: ಸೂರಂಬೈಲು ನಿವಾಸಿ, ಮಾಜಿ ಆಟೋ ಚಾಲಕ ಪುರುಷೋತ್ತಮ ಗಟ್ಟಿ (54) ಅವರು ಶನಿವಾರ ಮುಂಜಾನೆ ತಮ್ಮ ಮನೆಯ ಸಿಟೌಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

​ಬೆಳಿಗ್ಗೆ ಸುಮಾರು 6:30ರ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಕುಟುಂಬಸ್ಥರು ಅವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ.

ಈ ಹಿಂದೆ ಕುಂಬಳೆಯಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪುರುಷೋತ್ತಮ ಗಟ್ಟಿ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!