ಬ್ಯಾಂಕ್ ಸೆಕ್ಯೂರಿಟಿ ನೌಕರನ ಹತ್ಯೆ; ಇಬ್ಬರು ಆರೋಪಿಗಳ ಬಂಧನ

​ ಮಂಜೇಶ್ವರ: ಕುಂಬಡಾಜೆ ಸೇವಾ ಸಹಕಾರಿ ಬ್ಯಾಂಕಿನ ಮಾರ್ಪನಡ್ಕ ಶಾಖೆಯ ಭದ್ರತಾ ಸಿಬ್ಬಂದಿ ಸುರೇಶ್ ಬಿ.ಕೆ. (45) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್ (30) ಮತ್ತು ಅಖಿಲೇಷ್ (25) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

​ಕಳೆದ ಭಾನುವಾರ ರಾತ್ರಿ ಬ್ಯಾಂಕ್ ಪರಿಸರದಲ್ಲಿ ಈ ಕೃತ್ಯ ನಡೆದಿತ್ತು. ಕುಂದ್ಲಾಜೆ ಮೈದಾನದಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯಾಟದ ವೇಳೆ ಉಂಟಾದ ಸಣ್ಣ ಮಾತಿನ ಚಕಮಕಿಯೇ ಈ ಹತ್ಯೆಗೆ ಮೂಲ ಕಾರಣ ಎನ್ನಲಾಗಿದೆ. ಕೃತ್ಯದ ಬಳಿಕ ಬೈಕ್ ಬಿಟ್ಟು ಪರಾರಿಯಾಗಿದ್ದ ಆರೋಪಿಗಳು, ಏತಡ್ಕ ಮಾರ್ಗವಾಗಿ ಪುತ್ತೂರಿಗೆ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದರು. ಆದರೆ, ತಕ್ಷಣ ಕಾರ್ಯಪ್ರವೃತ್ತರಾದ ಬದಿಯಡ್ಕ ಪೊಲೀಸರು ಹಾದಿಮಧ್ಯೆಯೇ ಇಬ್ಬರನ್ನು ಸಿನಿಮೀಯ ಶೈಲಿಯಲ್ಲಿ ಅಡ್ಡಗಟ್ಟಿ ಸೆರೆಹಿಡಿದಿದ್ದಾರೆ.

​ ಕೊಲೆಯಾದ ಸುರೇಶ್ ಬೆದ್ರುಕೂಡ್ಲು ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಬ್ಯಾಂಕ್ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!