ಮೇ 31ರಂದು ನೀರ್ಚಾಲಿನಲ್ಲಿ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನ

ನೀರ್ಚಾಲು: ಕನ್ನಡದ ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಅವರ 85ನೇ ಅಭಿನಂದನಾ ಪೂರ್ವಕವಾಗಿ ‘ಮಂಜೇಶ್ವರದ ಮುತ್ತು’ ಸಾಕ್ಷ್ಯಚಿತ್ರ ಬಿಡುಗಡೆ, ಕುಟ್ಟಿಯಾನ ಮುಹಮ್ಮದ್ ಅವರ ‘ಕನಸುಗಳ ಭೂಮಿಗೆ ಯಾತ್ರೆ’ ಕೃತಿ ಬಿಡುಗಡೆ ಹಾಗೂ ‘ಕನ್ನಡಿಯಲ್ಲಿ ಕನ್ನಡಿಗ’ ಕೃತಿ ಸರಣಿಯ 7ನೇ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮೇ 31ರಂದು ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ನಡೆಯಲಿದೆ.

ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನದಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಗಡಿನಾಡಿನ ಕನ್ನಡ ಚಟುವಟಿಕೆಗಳಿಗೆ ವಿಶೇಷ ಒತ್ತನ್ನು ನೀಡಿ ಸಪ್ತ ಭಾಷಾ ಸಂಗಮ ಭೂಮಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ .

ಕಾರ್ಯಕ್ರಮದಲ್ಲಿ ವಿವಿಧ ಸಾಹಿತ್ಯಿಕರು, ಕಲಾವಿದರು, ಕನ್ನಡಾಭಿಮಾನಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿವೃದ್ದಿಗೆ ಸಂಬಂಧಿಸಿದಂತೆ ಚರ್ಚೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

SHARE
Loading spinner

Leave a Reply

Your email address will not be published. Required fields are marked *

error: Content is protected !!