ಕಾಸರಗೋಡಿನಲ್ಲಿ ನವವಧು ಆತ್ಮಹತ್ಯೆ ; ಮರಣದ ಕಾರಣದ ಕುರಿತು ತನಿಖೆ

​ಕಾಸರಗೋಡು : ಮದುವೆಯಾದ ಕೇವಲ ಒಂದು ತಿಂಗಳಲ್ಲೇ ನವವಧುವೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕುಟ್ಟಿಕೋಲ್‌ನ ಅಶ್ವತಿ (25) ಸಾವನ್ನಪ್ಪಿದ ದುರ್ದೈವಿ. ಖಾಸಗಿ ಆಸ್ಪತ್ರೆಯ ದಾದಿಯಾಗಿದ್ದ ಈಕೆ, ಮೇ 18ರಂದು ಮನೆಯಲ್ಲಿ ಅಸ್ವಸ್ಥರಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಹಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

​ಅಶ್ವತಿಯು ಪರಕ್ಕಳಾಯಿಯ ರೂಪೇಶ್ ಎಂಬುವರನ್ನು ಇತ್ತೀಚೆಗಷ್ಟೇ ಮದುವೆಯಾಗಿದ್ದರು. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಾಸರಗೋಡು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆ ಹಾಗೂ ಸಮಗ್ರ ತನಿಖೆಯನ್ನು ಆರಂಭಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!