ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್‌ನ ಆಡಳಿತವನ್ನು ಮತ್ತಷ್ಟು ಪಾರದರ್ಶಕಗೊಳಿಸುವ ಮತ್ತು ಸಾರ್ವಜನಿಕರಿಗೆ ಸೇವೆಗಳನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ, ಪಂಚಾಯತ್‌ನ ಅಧಿಕೃತ ವೆಬ್‌ಸೈಟ್ ಅನ್ನು ಪಂಚಾಯತು ಅಧ್ಯಕ್ಷ ಬಶೀರ್ ಕನಿಲ ಅಧಿಕೃತವಾಗಿ ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭ ಉಪಾಧ್ಯಕ್ಷೆ ಫಾತಿಮತ್ ಝವುರಾ ಹಾಗೂ ಪಂಚಾಯತ್ ಸದಸ್ಯರುಗಳು ಸಿಬ್ಬಂದಿಗಳು ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡರು.
ಈ ಡಿಜಿಟಲ್ ಉಪಕ್ರಮದ ಮೂಲಕ ಇನ್ನು ಮುಂದೆ ಪಂಚಾಯತ್‌ಗೆ ಸಂಬಂಧಿಸಿದ ವಿವಿಧ ಸೇವೆಗಳನ್ನು ನಾಗರಿಕರು ಮನೆಯಲ್ಲೇ ಕುಳಿತು ಪಡೆಯಬಹುದಾಗಿದೆ.ಪ್ರಮುಖವಾಗಿ ಜನನ ಪ್ರಮಾಣಪತ್ರ, ಮರಣ ಪ್ರಮಾಣಪತ್ರ ಮತ್ತು ವಿವಾಹ ನೋಂದಣಿ ಪ್ರಮಾಣಪತ್ರಗಳಿಗೆ ಸಂಬಂಧಿಸಿದ ಅರ್ಜಿಗಳು ಹಾಗೂ ಅಗತ್ಯ ಮಾಹಿತಿಗಳು ಈ ಪೋರ್ಟಲ್‌ನಲ್ಲಿ ಲಭ್ಯವಿವೆ.
ಪಂಚಾಯತ್‌ನ ಅಭಿವೃದ್ಧಿ ಕಾಮಗಾರಿಗಳು, ಕಲ್ಯಾಣ ಯೋಜನೆಗಳು ಮತ್ತು ವಿವಿಧ ಅನುದಾನಗಳ ಮಾಹಿತಿ ಪಾರದರ್ಶಕವಾಗಿ ಲಭ್ಯವಿರುತ್ತದೆ.
ಪಂಚಾಯತ್ ಹೊರಡಿಸುವ ಪ್ರಕಟಣೆಗಳು, ಸೂಚನೆಗಳು ಮತ್ತು ಇತ್ತೀಚಿನ ಸುದ್ದಿಗಳ ಕ್ಷಣಕ್ಷಣದ ಮಾಹಿತಿ ಇಲ್ಲಿ ಸಿಗಲಿದೆ.
ಸರ್ಕಾರಿ ಸೇವೆಗಳನ್ನು ಡಿಜಿಟಲ್ ರೂಪದಲ್ಲಿ ಒದಗಿಸುವ ಮೂಲಕ ಆಡಳಿತದಲ್ಲಿ ಚುರುಕುತನ ಮತ್ತು ವೇಗವನ್ನು ತರುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಮಂಜೇಶ್ವರ ಗ್ರಾಮ ಪಂಚಾಯತ್‌ನ ಈ ಹೊಸ ಡಿಜಿಟಲ್ ಸೇವೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಪಂಚಾಯತ್ ಆಡಳಿತ ಮಂಡಳಿಯು ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಲು ಕೋರಲಾಗಿದೆ.