ಜೂನ್ 14ರಂದು ಬಾಕುಡ ಸಮಾಜ ಸೇವಾ ಸಮಿತಿಯಿಂದ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಹೊಸಂಗಡಿ: ಬಾಕುಡ ಸಮಾಜ ಸೇವಾ ಸಮಿತಿ (ರಿ) ಕೇರಳ-ಕರ್ನಾಟಕ ಕೇಂದ್ರ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಉಚಿತ ಪುಸ್ತಕ ವಿತರಣೆ ಹಾಗೂ ಕಲಿಕಾ ಕಿಟ್‌ಗಳ ವಿತರಣೆಯನ್ನು ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ.


ಈ ಸಾಲಿನ ಉಚಿತ ಪುಸ್ತಕ ವಿತರಣೆ, ಕಲಿಕಾ ಕಿಟ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 14ರಂದು ಆದಿತ್ಯವಾರ ಹೊಸಂಗಡಿ ಸಮೀಪದ ಪ್ರೇರಣಾ ಹಾಲ್‌ನಲ್ಲಿ ನಡೆಯಲಿದೆ ಎಂದು ಸಮಿತಿಯು ತಿಳಿಸಿದೆ.


ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅಲ್ಲದೆ, ಸಮುದಾಯದ ಸದಸ್ಯರನ್ನು ಒಗ್ಗೂಡಿಸುವ ಉದ್ದೇಶದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!