ನಾಡೋಜ ಕವಿ ಡಾ. ಕಯ್ಯಾರ ಕಿನ್ಹಣ್ಣ ರೈ ಸ್ಮಾರಕ ಸಾಂಸ್ಕೃತಿಕ ಭವನ ವೀಕ್ಷಿಸಿದ ಶಾಸಕ ಕಲ್ಲಟ್ರ ಮಾಹಿನ್ ಹಾಜಿ

ಕಾಸರಗೋಡು, ಜೂ.11: ಕರ್ನಾಟಕ ಏಕೀಕರಣ ಹೋರಾಟಗಾರ, ನಾಡೋಜ ಕವಿ ಡಾ. ಕಯ್ಯಾರ ಕಿನ್ಹಣ್ಣ ರೈ ಅವರ ಸ್ಮರಣಾರ್ಥ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕಾಸರಗೋಡು ಜಿಲ್ಲೆಯ ಪೆರಡಾಳದಲ್ಲಿ ನಿರ್ಮಿಸಿರುವ ಸಾಂಸ್ಕೃತಿಕ ಭವನಕ್ಕೆ ಕಾಸರಗೋಡಿನ ನೂತನ ಶಾಸಕ ಕಲ್ಲಟ್ರ ಮಾಹಿನ್ ಹಾಜಿ ಭೇಟಿ ನೀಡಿ ವೀಕ್ಷಿಸಿದರು.

ಭವನದ ನಿರ್ಮಾಣ, ಸೌಲಭ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪೂರಕವಾದ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದ ಶಾಸಕ ಕಲ್ಲಟ್ರ ಮಾಹಿನ್ ಹಾಜಿ, ಭವನದ ನಿರ್ಮಾಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯಕಟ್ಟೆ, ಬದಿಯಡ್ಕ ಪಂಚಾಯತ್ ಮಾಜಿ ಅಧ್ಯಕ್ಷ ಮಾಹಿನ್ ಕೇಳೋಟ್, ನಿವೃತ್ತ ಪ್ರಾಂಶುಪಾಲ ಎ. ಶ್ರೀನಾಥ್, ಕರ್ನಾಟಕ ಗಮಕ ಕಲಾ ಪರಿಷತ್ತು ಕೇರಳ ಘಟಕದ ಅಧ್ಯಕ್ಷ ಟಿ. ಶಂಕರನಾರಾಯಣ ಭಟ್, ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯ ಅನ್ವರ್ ಸಾದಾತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!