ಕೇರಳ ರಾಜ್ಯ-ಕಾಸರಗೋಡು ಜಿಲ್ಲಾ ಕನ್ನಡ ಸಂಘಟನೆಗಳ ಡೈರೆಕ್ಟರಿ ಪ್ರಕಟಣೆ; ಮಾಹಿತಿ ಕೋರಿಕೆ

ಕಾಸರಗೋಡು: ಕೇರಳ ರಾಜ್ಯದ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ತನ್ನ 36ನೇ ಸಂಸ್ಥಾಪನಾ ವರ್ಷಾಚರಣೆಯ ಅಂಗವಾಗಿ ಕೇರಳ ರಾಜ್ಯ ಹಾಗೂ ಕಾಸರಗೋಡು ಜಿಲ್ಲಾ ಕನ್ನಡ ಸಂಘಟನೆಗಳ ವಿಳಾಸಗಳ ಡೈರೆಕ್ಟರಿಯ 2ನೇ ಪರಿಷ್ಕೃತ ಆವೃತ್ತಿಯನ್ನು ಪ್ರಕಟಿಸಲು ನಿರ್ಧರಿಸಿದೆ.

ಈ ಡೈರೆಕ್ಟರಿಯಲ್ಲಿ ಕೇರಳ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಕಾಸರಗೋಡು ಜಿಲ್ಲೆಯ ಸುಮಾರು 500ಕ್ಕೂ ಅಧಿಕ ಕನ್ನಡ, ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಕನ್ನಡಪರ ಸಂಘಟನೆಗಳು, ಸಾರ್ವಜನಿಕ ಸ್ವಯಂಸೇವಾ ಸಂಸ್ಥೆಗಳು, ಸುಮಾರು 500 ಭಜನಾ ಸಂಘಗಳು, ಭಜನಾ ಮಂಡಳಿಗಳು, ಭಜನಾ ಮಂದಿರಗಳು ಹಾಗೂ ಸುಮಾರು 200 ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳ ಮಾಹಿತಿಯನ್ನು ಒಳಗೊಂಡಿರಲಿದೆ.

ಸಂಸ್ಥೆಗಳ ಹೆಸರು, ಪೂರ್ಣ ವಿಳಾಸ, ಮೊಬೈಲ್ ಮತ್ತು ವಾಟ್ಸ್‌ಆ್ಯಪ್ ಸಂಖ್ಯೆ, ಇ-ಮೇಲ್, ಸ್ಥಾಪನೆಯಾದ ವರ್ಷ, ನೋಂದಣಿ ಸಂಖ್ಯೆ ಸೇರಿದಂತೆ ಸಂಕ್ಷಿಪ್ತ ಮಾಹಿತಿಯ ಜೊತೆಗೆ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಇತರ ಪದಾಧಿಕಾರಿಗಳ ವಿವರಗಳನ್ನು ಸಂಸ್ಥೆಯ ಲೆಟರ್‌ಹೆಡ್‌ನಲ್ಲಿ ನಮೂದಿಸಿ 2026ರ ಆಗಸ್ಟ್ 30ರೊಳಗೆ ಕಳುಹಿಸುವಂತೆ ಪ್ರತಿಷ್ಠಾನ ಮನವಿ ಮಾಡಿದೆ.

ಮಾಹಿತಿಯನ್ನು ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು – 671121 ಈ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448572016, 9901951965 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!