ಕನ್ನಡ ಸಾಹಿತ್ಯಾಸಕ್ತರ ವಿಳಾಸ ಕೋರಿಕೆ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.), ಕನ್ನಡ ಗ್ರಾಮ, ಕಾಸರಗೋಡು ನೇತೃತ್ವದಲ್ಲಿ 2026ರ ನವೆಂಬರ್ 7 ಮತ್ತು 8ರಂದು ನಡೆಯಲಿರುವ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ, ಕೇರಳ-ಕರ್ನಾಟಕ ಉತ್ಸವ, ಕನ್ನಡ ರಾಜ್ಯೋತ್ಸವ ಹಾಗೂ ಕೇರಳ ರಾಜ್ಯ ದ್ವಿತೀಯ ಮಕ್ಕಳ ಸಾಹಿತ್ಯ ಸಮ್ಮೇಳನ-2026 ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಕಳುಹಿಸುವ ಉದ್ದೇಶದಿಂದ ಕನ್ನಡ ಸಾಹಿತ್ಯಾಸಕ್ತರ ವಿಳಾಸಗಳನ್ನು ಕೋರಲಾಗಿದೆ.

ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕಲಾವಿದರು, ಲೇಖಕರು, ಸಾಹಿತಿಗಳು, ಕವಿಗಳು, ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಜಾಲತಾಣಗಳ ಆಡಳಿತಗಾರರು, ಸಾರ್ವಜನಿಕರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಜೀವ ಸದಸ್ಯರು ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಮತ್ತು ವಾಟ್ಸ್‌ಆ್ಯಪ್ ಸಂಖ್ಯೆಗಳನ್ನು ಕಳುಹಿಸುವಂತೆ ಮನವಿ ಮಾಡಲಾಗಿದೆ.

ಸಂಪರ್ಕ:
ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.), ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು – 671121.

ಮೊಬೈಲ್: 9448572016 / 9901951965
ಇ-ಮೇಲ್: Shivaramakasaragod@gmail.com

ಈ ಮಾಹಿತಿ ನೀಡುವಂತೆ ಪ್ರತಿಷ್ಠಾನವು ಪ್ರಕಟಣೆಯಲ್ಲಿ ಕೋರಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!