ವಿವಾಹ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಅನ್ನದಾನ

ಮಂಜೇಶ್ವರ : ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಶ್ರೀ ಸಂಜೀವ ಶೆಟ್ಟಿ ಹಾಗೂ ಶ್ರೀಮತಿ ಅಮಿತಾ ಸಂಜೀವ ಶೆಟ್ಟಿ ಮಾಡ ದಂಪತಿಗಳ 47ನೇ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ವಿಶೇಷ ಅನ್ನದಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಜಿ.ಎಲ್.ಪಿ. ಶಾಲೆ, ಮಾಡ ಇದರ ವಿದ್ಯಾರ್ಥಿಗಳಿಗೆ ಅನ್ನದಾನ ನೆರವೇರಿಸಲಾಯಿತು. ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ದಂಪತಿಗಳು ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿ, ವಿದ್ಯಾರ್ಥಿಗಳೊಂದಿಗೆ ಸಂತಸ ಹಂಚಿಕೊಂಡರು.ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದು, ದಂಪತಿಗಳ ಸೇವಾ ಮನೋಭಾವವನ್ನು ಶ್ಲಾಘಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!