ಹೊಸಂಗಡಿಯಲ್ಲಿ ಬೈಕ್ ಸವಾರರ ಕೈಚಳಕ; ಎರಡು ಪವನ್ ಸರ ಎಳೆದು ಪರಾರಿ

ಹೊಸಂಗಡಿ, ದಾರಿ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಯಿಂದ ಎರಡು ಪವನ್ ತೂಕದ ಚಿನ್ನದ ಸರ ಎಳೆದೊಯ್ದ ಘಟನೆ ಹೊಸಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದೆ.

ಪೈವಳಿಕೆ ಬಾಯಿಕಟ್ಟೆ ನಿವಾಸಿ ಎ. ನಯನಾ (30) ಅವರು ಸೋಮವಾರ ಸಂಜೆ ಸುಮಾರು 4 ಗಂಟೆಯ ವೇಳೆಗೆ ಹೊಸಂಗಡಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಎಸ್‌ಬಿಐ ಬ್ಯಾಂಕ್ ಸಮೀಪ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ದಾರಿ ಕೇಳುವ ನೆಪದಲ್ಲಿ ಅವರನ್ನು ಸಮೀಪಿಸಿ, ಕ್ಷಣಾರ್ಧದಲ್ಲಿ ಅವರ ಕುತ್ತಿಗೆಯಲ್ಲಿದ್ದ ಎರಡು ಪವನ್ ತೂಕದ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳು ರೈನ್‌ಕೋಟ್ ಹಾಗೂ ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಘಟನೆ ಬಳಿಕ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನಾ ಸ್ಥಳದ ಸುತ್ತಮುತ್ತ ಹಾಗೂ ರಾಷ್ಟ್ರೀಯ ಹೆದ್ದಾರಿಯ ಸಿಸಿ ಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಅಲ್ಲದೆ, ಕಳುವಾದ ಚಿನ್ನದ ಸರದ ಸುಳಿವಿಗಾಗಿ ಸ್ಥಳೀಯ ಜ್ಯುವೆಲ್ಲರಿ ಅಂಗಡಿಗಳಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!