ಮಂಜೇಶ್ವರ: ಮಂಜೇಶ್ವರದಲ್ಲಿ ಹಗಲಹೊತ್ತಿನಲ್ಲೇ ಸ್ಕೂಟರ್ನಲ್ಲಿ ಬಂದು, ಯುವತಿಯೊಬ್ಬಳ ಕತ್ತಿನಲ್ಲಿದ್ದ ಎರಡೂಕಾಲು ಪವನ್ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಬಂಬ್ರಾಣಿ ನಿವಾಸಿ ಎ. ಸಂದೀಪ್ (31) ಬಂಧಿತ ಆರೋಪಿಯಾಗಿದ್ದಾನೆ.
ಘಟನೆಯ ನಂತರ ಸ್ಕೂಟರ್ನಲ್ಲಿ ಪರಾರಿಯಾದ ಆರೋಪಿಗಳಿಗಾಗಿ ಮಂಜೇಶ್ವರ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದರು. ಇದೀಗ ಸಂದೀಪ್ನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕೃತ್ಯದಲ್ಲಿ ಭಾಗಿಯಾದ ಆತನ ಮತ್ತೊಬ್ಬ ಸಹಚರನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಮುಂದುವರಿದಿದ್ದು, ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ವಶಪಡಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.