ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ; ಚಾಲಕನ ವಿರುದ್ಧ ಪ್ರಕರಣ ದಾಖಲು

ಕಾಸರಗೋಡು: ಅಜಾಗರೂಕತೆಯಿಂದ ಕಾರು ಚಲಾಯಿಸಿ ಇಬ್ಬರು ವಿದ್ಯಾರ್ಥಿಗಳ ಗಂಭೀರ ಗಾಯಕ್ಕೆ ಕಾರಣವಾದ ಘಟನೆಗೆ ಸಂಬಂಧಿಸಿ ಆದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಳ್ಳೇರಿಯ ವಿವೇಕಾನಂದನಗರದ ಶ್ರೀಯಾನ್ (5) ಮತ್ತು ದೀಕ್ಷಾ (17) ಗಾಯಗೊಂಡ ವಿದ್ಯಾರ್ಥಿಗಳು.
​ಕಳೆದ ಮಂಗಳವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ಗಜಾನನ ಶಾಲೆ ಸಮೀಪದ ರಸ್ತೆಯಲ್ಲಿ ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾಗ, ಅತೀ ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದೆ. ದೀಕ್ಷಾ ಮುಳ್ಳೇರಿಯ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದು, ಶ್ರೀಯಾನ್ ಪ್ರೀ ಪ್ರೈಮರಿ ಶಾಲೆಯ ವಿದ್ಯಾರ್ಥಿ.

ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನುಷ್ಯ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ವಾಹನ ಚಲಾಯಿಸಿದ ಚಾಲಕನ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!