ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಪರಾರಿಯಾಗಿದ್ದ ಅಧ್ಯಾಪಕ ಬಿಹಾರದಲ್ಲಿ ಸೆರೆ

​ಕಾಸರಗೋಡು: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪೋಕ್ಸೋ ಪ್ರಕರಣಗಳನ್ನು ಎದುರಿಸುತ್ತಿದ್ದ ಅಧ್ಯಾಪಕ ಎಂ.ಕೆ. ಮೊಹಮ್ಮದ್‌ನನ್ನು ವಳಾಂಜೇರಿ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.
ಮಲಪ್ಪುರಂ ಆದವನಾಡ್ ಮೂಲದ ಆರೋಪಿಯು ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದನೆನ್ನಲಾಗಿದೆ.

​ಬೇಕಲದಲ್ಲಿ ಇಬ್ಬರು ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಜೊತೆಗೆ, ಮಲಪ್ಪುರಂನ ಮದ್ರಸವೊಂದರ 14 ವಿದ್ಯಾರ್ಥಿಗಳಿಗೂ ಈತ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿತ್ತು.

ಆರೋಪಿಯ ಸುಳಿವು ಪಡೆದ ವಳಾಂಜೇರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬಿಹಾರದಲ್ಲಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ಸ್ಥಳೀಯವಾಗಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೇ ಬಾರಿಗೆ ಅನೇಕ ಮಕ್ಕಳ ಮೇಲೆ ನಡೆದ ಈ ದೌರ್ಜನ್ಯದ ಘಟನೆ ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!