ಮಂಜೇಶ್ವರ : ಕುಂಜತ್ತೂರು ವಿದ್ಯಾನಿಕೇತನ ಶಾಲೆಯಲ್ಲಿ ಗುರು ಪೂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬಾಲ ಗೋಕುಲದ ಮಕ್ಕಳಿಂದ ಗುರು ಪೂರ್ಣಿಮೆ ಪ್ರಯುಕ್ತ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು.
ನಂತರ ನಡೆದ ಕಾರ್ಯಕ್ರಮದಲ್ಲಿ ನಿರಂಜನ್ ತುಮಿನಾಡು ಭೌದಿಕ್ ನೀಡಿದರು. ಮುಖ್ಯ ಅತಿಥಿಗಳಾಗಿ ಸರಸ್ವತಿ ಟೀಚರ್, ವಿಶ್ವನಾಥ ಶೆಟ್ಟಿ ಹಾಗೂ ಸುರೇಶ್ ಶೆಟ್ಟಿ ಭಾಗವಹಿಸಿದರು. ಸ್ವಾತಿ ನಿತಿನ್ ರೈ ಅಧ್ಯಕ್ಷತೆ ವಹಿಸಿದ್ದರು.