ಕಾಸರಗೋಡು, ಜು. 2: ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘದ 41ನೇ ವರ್ಷಾಚರಣೆ ಹಾಗೂ ರಾಜ್ಯಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ ಅಂಗವಾಗಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸಮಾರಂಭ ನಡೆಯಿತು.
ಲೇಖಕ ಹಾಗೂ ಪತ್ರಿಕಾ ಅಂಕಣಕಾರ ವಿಷ್ಣು ಕೆ. ಶ್ಯಾನುಭೋಗ್ ಕೂಡ್ಲು ಅಧ್ಯಕ್ಷತೆ ವಹಿಸಿದ್ದರು. ಗಡಿನಾಡಿನಲ್ಲಿ ಕನ್ನಡ ಪತ್ರಿಕೋದ್ಯಮದ ಇತಿಹಾಸ ಕುರಿತು ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ವಿಶೇಷ ಉಪನ್ಯಾಸ ನೀಡಿದರು.


ಈ ಸಂದರ್ಭದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಛಾಯಾಗ್ರಾಹಕ ಶ್ರೀಕಾಂತ ಕಾಸರಗೋಡು, ಜಯಾನಂದ ಕುಮಾರ್ ಹೊಸದುರ್ಗ, ವಿಷ್ಣು ಕೆ. ಶ್ಯಾನುಭೋಗ್ ಹಾಗೂ ಗಣೇಶ್ ಪಾರೆಕಟ್ಟೆ ಅವರಿಗೆ ರಾಜ್ಯಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕಾಸರಗೋಡು ಕನ್ನಡ ಪತ್ರಿಕಾ ಮ್ಯೂಸಿಯಂ ಹಾಗೂ ಡಿಜಿಟಲ್ ಕನ್ನಡ ಪತ್ರಿಕಾ ಮಾಧ್ಯಮ ಕೇಂದ್ರ ಸ್ಥಾಪಿಸುವ ಯೋಜನೆಯನ್ನು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಕಟಿಸಿದರು. ವಿವಿಧ ಕ್ಷೇತ್ರಗಳ ಗಣ್ಯರು, ಪತ್ರಕರ್ತರು ಹಾಗೂ ಕನ್ನಡಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


