​ಮಂಜೇಶ್ವರ ಎಸ್.ಎ.ಟಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಅದ್ಧೂರಿ ಪ್ಲಸ್ ಒನ್ ಪ್ರವೇಶೋತ್ಸವ

​ಮಂಜೇಶ್ವರ: ಸ್ಥಳೀಯ ಸುಪ್ರಸಿದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸರಕಾರಿ ಅನುದಾನಿತ ಮಂಜೇಶ್ವರ ಎಸ್.ಎ.ಟಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇಂದು ನೂತನ ವಿದ್ಯಾರ್ಥಿಗಳಿಗಾಗಿ ‘ಪ್ಲಸ್ ಒನ್ ಪ್ರವೇಶೋತ್ಸವ’ ಸಂಭ್ರಮದಿಂದ ನಡೆಯಿತು.
​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಟಿ.ಎ ಅಧ್ಯಕ್ಷ ಇಬ್ರಾಹಿಂ ಅವರು ವಹಿಸಿದ್ದರು.

ಸಮಾರಂಭವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ರೀನಾ ಬಾಯ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

​ಈ ಸಂದರ್ಭದಲ್ಲಿ ಮಾತನಾಡಿದ ಅತಿಥಿಗಳು, ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಶಾಲೆಯ ಶೈಕ್ಷಣಿಕ ವಾತಾವರಣ ಹಾಗೂ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.

ಶಾಲೆಯ ಪ್ರಾಂಶುಪಾಲೆ ಸುಮನ ಸೇರಿದಂತೆ ಪಿ.ಟಿ.ಎ ಕಾರ್ಯಕಾರಿ ಸಮಿತಿಯ ಸದಸ್ಯರಾದ ಆಯಿಷಾ, ಝಕರಿಯ್ಯ, ಮನೋಜ್, ಮನೋಜ್, ಮುಂತಾಸ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದರು.

​ಶಾಲಾ ಮುಖ್ಯೋಪಾಧ್ಯಾಯಿನಿ ಸುರೇಖ ಮಲ್ಯ ಅವರು ನೆರೆದಿದ್ದವರನ್ನು ಸ್ವಾಗತಿಸಿದರು. ಆರತಿ ಅವರು ಕಾರ್ಯಕ್ರಮದ ವಂದನಾರ್ಪಣೆ ಮಾಡಿದರು

SHARE
Loading spinner

Leave a Reply

Your email address will not be published. Required fields are marked *

error: Content is protected !!