ಕಾಸರಗೋಡು: ಜಾನಪದ ಕಲೆಯ ಪೋಷಕ ಹಾಗೂ ಸಂಘಟಕರಾದ ಕೆ. ನಾಗರಾಜ್ ಅವರಿಗೆ ‘ಕನ್ನಡ ಪಯಸ್ವಿನಿ ಕಲಾ ರತ್ನ’ ಅಂತರ್ರಾಜ್ಯ ಪ್ರಶಸ್ತಿ–2026 ಪ್ರದಾನ ಮಾಡಲಾಗುತ್ತಿದೆ.
ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಸಮಾರಂಭ ಹಾಗೂ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದ ಅಂಗವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಕೆ. ನಾಗರಾಜ್ ಅವರಿಗೆ ಪ್ರದಾನಿಸಲಾಗುವುದು.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾನಪದ ಕಲೆ ಮತ್ತು ಕನ್ನಡ ಸಂಸ್ಕೃತಿಯ ಬೆಳವಣಿಗೆಗೆ ಕೆ. ನಾಗರಾಜ್ ಅವರು ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ


