ಪ್ರಕಾಶ ಮತ್ತಿಹಳ್ಳಿಗೆ ‘ರಾಷ್ಟ್ರಕವಿ ಗೋವಿಂದ ಪೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’

ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಅವರನ್ನು ಕಾಸರಗೋಡು ಕನ್ನಡ ಭವನವು ರಾಷ್ಟ್ರಕವಿ ಗೋವಿಂದ ಪೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’**ಗೆ ಆಯ್ಕೆ ಮಾಡಿದೆ.

ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಸಮಾರಂಭ ಹಾಗೂ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದ ಅಂಗವಾಗಿ ಪ್ರಕಾಶ ಮತ್ತಿಹಳ್ಳಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಗಡಿ ಪ್ರದೇಶಗಳ ಅಭಿವೃದ್ಧಿ ಹಾಗೂ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಗಡಿನಾಡಿನ ಜನರ ಹಿತಕ್ಕಾಗಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪ್ರಕಾಶ ಮತ್ತಿಹಳ್ಳಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!