ಎಡಕ್ಕಾನ ಶಾಂಭವಿ ಫ್ಯಾಮಿಲಿ ಟ್ರಸ್ಟ್‌ನಿಂದ ವಿದ್ಯಾರ್ಥಿಗಳಿಗೆ ಸೌಲಭ್ಯ
ಚೇವಾರು, ಜು. 8: ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಗೆ ಎಡಕ್ಕಾನ ಶಾಂಭವಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕೊಡುಗೆಯಾಗಿ ನೀಡಲಾದ ನೀರಿನ ಶುದ್ಧೀಕರಣ ಘಟಕ (ವಾಟರ್ ಪ್ಯೂರಿಫೈಯರ್)ವನ್ನು ಕೆನರಾ ಬ್ಯಾಂಕ್‌ನ ನಿವೃತ್ತ ಅಧಿಕಾರಿ ಎಡಕ್ಕಾನ ಶ್ರೀ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಾರ್ಡ್ ಪ್ರತಿನಿಧಿ ಅಬ್ದುಲ್ ಅಸೀಸ್ ಚೇವಾರ್, ನೂತನ ಪಿ.ಟಿ.ಎ. ಅಧ್ಯಕ್ಷ ಕಲಂದರ್ ಶಾಫಿ, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ರಾಜೇಶ್ವರಿ ಬಿ., ನಿವೃತ್ತ ಮುಖ್ಯ ಶಿಕ್ಷಕ ಶ್ಯಾಮ್ ಭಟ್, ಎಂ.ಪಿ.ಟಿ.ಎ. ಅಧ್ಯಕ್ಷೆ ಸ್ಮಿತಾ, ಅಬ್ದುಲ್ ರಹಿಮಾನ್, ರಕ್ಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಟ್ರಸ್ಟ್ ಈ ನೀರಿನ ಶುದ್ಧೀಕರಣ ಘಟಕವನ್ನು ಕೊಡುಗೆಯಾಗಿ ನೀಡಿದೆ.


