ಕುಂಬಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ವತಿಯಿಂದ ಸಮಾಜ ಮಂದಿರದಲ್ಲಿ ಆಯೋಜನೆ
ಏತಡ್ಕ, ಜು. 8: ಕುಂಬಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯ, ಏತಡ್ಕ ಇದರ ವತಿಯಿಂದ ಕನ್ನಡದ ಹಿರಿಯ ಕವಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ Kayyara Kinhanna Rai ಅವರ ಸಂಸ್ಮರಣಾ ಕಾರ್ಯಕ್ರಮವು ಜುಲೈ 11ರಂದು (ಶನಿವಾರ) ಏತಡ್ಕದ ಸಮಾಜ ಮಂದಿರದಲ್ಲಿ ನಡೆಯಲಿದೆ.

ಸಂಜೆ 5 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಬಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ಅಧ್ಯಕ್ಷ ವೈ.ಕೆ. ಗಣಪತಿ ಭಟ್ ಏತಡ್ಕ ವಹಿಸಲಿದ್ದು, ಸಾಹಿತ್ಯಾಸಕ್ತ ಕೃಷಿಕ ದಯಾನಂದ ರೈ ಕಳ್ವಾಜೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕುಂಬಡಾಜೆ ಪಂಚಾಯತ್ ಗ್ರಂಥಾಲಯ ಸಮಿತಿಯ ಸಂಚಾಲಕ ಪ್ರಶಾಂತ್ ಜಿ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು.
ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಕವಿ ಕಯ್ಯಾರ ಕಿಞ್ಞಣ್ಣ ರೈ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕುಂಬಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ.

