ಕಾಸರಗೋಡು: ಕನ್ನಡ ಜಾನಪದ ಕಲೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ, ಕನ್ನಡ ಜಾನಪದ ಪರಿಷತ್‌ನ ಸ್ಥಾಪಕರಾದ ಡಾ. ಎಸ್. ಬಾಲಾಜಿ ಅವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನ ನೀಡುವ ಪ್ರತಿಷ್ಠಿತ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ಗೆ ಆಯ್ಕೆ ಮಾಡಲಾಗಿದೆ.
ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಅಂಗವಾಗಿ ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಡಾ. ಎಸ್. ಬಾಲಾಜಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಈ ವಿಷಯವನ್ನು ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


