ಜುಲೈ 26ರಂದು ಕಾಸರಗೋಡು ಕನ್ನಡ ಭವನದಲ್ಲಿ ನಡೆಯುವ ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ
ಕಾಸರಗೋಡು, ಜು. 10: ಕವಯತ್ರಿ, ಲೇಖಕಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಮತಿ ಪವಿತ್ರಾ ದಿನೇಶ್ ಕೊಕ್ಕಡ ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ–ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ ಘೋಷಿಸಲಾಗಿದೆ.

ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ, ಕನ್ನಡ ಭವನ ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಡಾ. ವಾಮನ್ ರಾವ್ ಬೇಕಲ್ ಸ್ಥಾಪಿತ ಕೇರಳ ರಾಜ್ಯ–ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಜುಲೈ 26ರಂದು (ಭಾನುವಾರ) ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿರುವ **‘ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ’**ದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಸಿ. ಸೋಮಶೇಖರ್, ಐಎಎಸ್, ಭಾಗವಹಿಸಲಿದ್ದಾರೆ.
ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


