ರಥ ಶಿಲ್ಪ ರತ್ನ ಡಾ. ಯಲ್ಲಪ್ಪ ಬಡಿಗೇರರಿಗೆ ಅಂತರ್ ರಾಜ್ಯ ಪ್ರಶಸ್ತಿ

ಕಾಸರಗೋಡು, ಜು. 10: ಕೊಪ್ಪಳ ಜಿಲ್ಲೆಯ ಭಾನಾಪುರದ ಖ್ಯಾತ ರಥ ಶಿಲ್ಪಿ ಡಾ. ಯಲ್ಲಪ್ಪ ಬಡಿಗೇರ ಅವರು 2026ನೇ ಸಾಲಿನ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ರಥ ಶಿಲ್ಪ ರತ್ನ – ಅಚೀವ್ಮೆಂಟ್ ಅವಾರ್ಡ್” ಅಂತರ್ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಗಡಿನಾಡು ಕಾಸರಗೋಡಿನ ಕನ್ನಡ ಭವನ ಗ್ರಂಥಾಲಯ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಡಾ. ಕೆ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಡಾ. ಯಲ್ಲಪ್ಪ ಬಡಿಗೇರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!