ಕಾಸರಗೋಡು: ಮಂಜೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಬೆಟ್ಟು ಪ್ರದೇಶದ ಮನೆಯಿಂದ ಮೂರುವರೆ ಪವನ್ ತೂಕದ ಚಿನ್ನದ ಸರ ಹಾಗೂ ₹8,000 ನಗದು ಕಳ್ಳತನವಾಗಿದೆ ಎಂದು ದೂರು ದಾಖಲಾಗಿದೆ.

ಗುಡ್ಡಗೇರಿ ಸೀನತ್ ಮಂಝಿಲ್ ನಿವಾಸಿ ಸೌದ (41) ಅವರು ನೀಡಿದ ದೂರಿನ ಆಧಾರದ ಮೇಲೆ ಮಂಜೇಶ್ವರಂ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಜುಲೈ 2ರಂದು ಬೆಳಿಗ್ಗೆ 11 ಗಂಟೆಯಿಂದ ಜುಲೈ 6ರಂದು ಸಂಜೆ 5 ಗಂಟೆಯೊಳಗಿನ ಅವಧಿಯಲ್ಲಿ ಕಳ್ಳತನ ನಡೆದಿರಬಹುದು ಎಂದು ಸೌದ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಮನೆಯೊಳಗಿನ ಕಪಾಟಿನಲ್ಲಿ ಇಡಲಾಗಿದ್ದ ಚಿನ್ನದ ಸರ ಮತ್ತು ನಗದು ಕಳ್ಳತನವಾಗಿವೆ.
ಪ್ರಕರಣದ ತನಿಖೆಯ ಭಾಗವಾಗಿ ಇಂದು (ಶುಕ್ರವಾರ) ಬೆರಳಚ್ಚು ತಜ್ಞರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

