ಕಾಸರಗೋಡು/ಕಣ್ಣೂರು: ಶುಕ್ರವಾರ ರಾತ್ರಿ ಕಣ್ಣೂರಿನ ಚಾಲೋಡ್ ಬಳಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ಉತ್ತರ ಪ್ರದೇಶದ ಮೂಲದ ಪರಮ್ ಛೇತ್ರಿ, ಹರ್ಷ್ ಹಾಗೂ ಕೇರಳದ ರಿಜ್ವಾನ್ ಮತ್ತು ಶಾನ್ ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಗ್ನಿಶಾಮಕ ದಳದವರು ಕಾರನ್ನು ಕತ್ತರಿಸಿ ಮೃತದೇಹಗಳನ್ನು ಹೊರತೆಗೆದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


