ಮಂಡ್ಯದ ಕವಯತ್ರಿ ಸುಮನ ರಾವ್‌ಗೆ ಕಾಸರಗೋಡಿನ ಪ್ರತಿಷ್ಠಿತ ಸಾಹಿತ್ಯ ರತ್ನ ಪ್ರಶಸ್ತಿ

ಕಾಸರಗೋಡು : ಮಂಡ್ಯ ಜಿಲ್ಲೆಯ ಜನಪ್ರಿಯ ಕವಯತ್ರಿ, ಆದರ್ಶ ಶಿಕ್ಷಕಿ ಹಾಗೂ ಗುರುಕುಲ ಪ್ರತಿಷ್ಠಾನದ ಮಂಡ್ಯ ಜಿಲ್ಲಾಧ್ಯಕ್ಷೆ ಶ್ರೀಮತಿ ಸುಮನ ರಾವ್ ಅವರಿಗೆ ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಯಾದ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ‘ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ – ಅಚೀವ್‌ಮೆಂಟ್ ಅವಾರ್ಡ್–2026’ ಅಂತರ್ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಆಯೋಜಿಸಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಶ್ರೀಮತಿ ಸುಮನ ರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ಕುರಿತು ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!