ಡಾ. ಶಾಂತಾ ಪುತ್ತೂರು ಇವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026

ಕಾಸರಗೋಡು :ಪುತ್ತೂರಿನ ಬಹುಮುಖ ಪ್ರತಿಭೆ, ಶಿಕ್ಷಕಿ, ಸಾಹಿತಿ, ಸಂಘಟಕಿ ಡಾ. ಶಾಂತಾ ಪುತ್ತೂರು ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು.

ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಗೌರವ ಪ್ರದಾನ ನಡೆಯಲಿದೆ. ಕಾಸರಗೋಡಿನ ಕನ್ನಡ ಭವನ ಪ್ರಕಾಶನ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿಯ ಸಹಕಾರದಲ್ಲಿ ಈ ಸಮ್ಮೇಳನ ನಡೆಯಲಿದೆ. ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿ ಸದಾ ಕ್ರಿಯಾಶೀಲರಾದ ಡಾ. ಶಾಂತಾ ಪುತ್ತೂರು ಅನೇಕ ಹೊಸ ಪ್ರತಿಭೆಗಳನ್ನು ಬೆಳಕಿಗೆ ತಂದಿದ್ದಾರೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ ಹಾಗೂ ಕಾಸರಗೋಡಿನ ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!