ಲಕ್ಷ್ಮೀ ವಿ ಭಟ್ ಇವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026

ಕಾಸರಗೋಡು : ನಿವೃತ್ತ ಶಿಕ್ಷಕಿ, ಸಾಹಿತಿ ಮಂಜೇಶ್ವರದ ತಲಂಜೇರಿಯ ಲಕ್ಷ್ಮಿ ವಿ ಭಟ್ ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು. ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಗೌರವ ಪ್ರದಾನ ನಡೆಯಲಿದೆ. ಕಾಸರಗೋಡಿನ ಕನ್ನಡ ಭವನ ಪ್ರಕಾಶನ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿಯ ಸಹಕಾರದಲ್ಲಿ ಈ ಸಮ್ಮೇಳನ ನಡೆಯಲಿದೆ.

ಲಕ್ಷ್ಮಿ ವಿ ಧಟ್ ಅವರು ಮಂಗಳೂರಿನ ಕೆನರಾ ಪ್ರೌಢಶಾಲೆಯಲ್ಲಿ 32 ವರ್ಷ ಕನ್ನಡ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದಿದ್ದಾರೆ. ವಿವಿಧ ಸಂಘಟನೆಗಳಿಂದ ಕನ್ನಡ ಸಾಹಿತ್ಯ ಸೇವೆಗಾಗಿ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅನೇಕ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ
ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ ಹಾಗೂ ಕಾಸರಗೋಡಿನ ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!