ಸುಳ್ಯ ತಾ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು, ಜು. 13:* ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಸದಸ್ಯರಾಗಿರುವ, ಸಾಹಿತ್ಯ–ಸಂಸ್ಕೃತಿ ಪೋಷಕರಾದ ಶ್ರೀ ಚಂದ್ರಶೇಖರ ಪೇರಾಲು ಅವರನ್ನು ಗಡಿನಾಡು ಕಾಸರಗೋಡಿನ ಖ್ಯಾತ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ವತಿಯಿಂದ ಪ್ರದಾನ ಮಾಡಲಾಗುವ ಪ್ರತಿಷ್ಠಿತ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ – 2026”ಗೆ ಆಯ್ಕೆ ಮಾಡಲಾಗಿದೆ.

ಜುಲೈ 26ರಂದು ಕನ್ನಡ ಭವನದ *ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ *”ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”**ದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!