ಕಾಸರಗೋಡು:ರಾಮಕ್ಷತ್ರಿಯ ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ನೀಡಲಾಗುವ “ಭರವಸೆಯ ಬೆಳಕು – ಸ್ಟೂಡೆಂಟ್ ಅಚೀವ್‌ಮೆಂಟ್ ಅವಾರ್ಡ್” ಹಾಗೂ ಶಿಕ್ಷಕರಿಗೆ ಪ್ರದಾನ ಮಾಡುವ “ಭರವಸೆಯ ಶಿಕ್ಷಣ ರತ್ನ – ಟೀಚರ್ಸ್ ಅಚೀವ್‌ಮೆಂಟ್ ಅವಾರ್ಡ್ 2026” ಕಾರ್ಯಕ್ರಮವನ್ನು ಜುಲೈ 26ಕ್ಕೆ ಮುಂದೂಡಲಾಗಿದೆ.

ಕನ್ನಡ ಭವನ, ಕಾಸರಗೋಡು ವತಿಯಿಂದ ನೀಡಲಾಗುವ ಈ ಪ್ರತಿಭಾ ಪುರಸ್ಕಾರ ಸಮಾರಂಭವು ಈ ಹಿಂದೆ ಪ್ರಕಟಿಸಿದ್ದ ದಿನಾಂಕದ ಬದಲಿಗೆ ಜುಲೈ 26, ಭಾನುವಾರ ನಡೆಯಲಿದೆ ಎಂದು ಕನ್ನಡ ಭವನದ ಸ್ಥಾಪಕ-ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ನುಳ್ಳಿಪ್ಪಾಡಿಯ ಕನ್ನಡ ಭವನ ಗ್ರಂಥಾಲಯದ ಬಯಲು ರಂಗಮಂಟಪದಲ್ಲಿ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಶ್ರೀಮದ್ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


