ದಕ್ಷಿಣ ಗೋವಾ ಕ.ಸಾ.ಪ. ಅಧ್ಯಕ್ಷ ಬಸವರಾಜ್ ಬನ್ನಿಕೊಪ್ಪಗೆ ‘ಕನ್ನಡ ಪಯಸ್ವಿನಿ’ ಅಂತರ್ ರಾಜ್ಯ ಪ್ರಶಸ್ತಿ-2026

ಕಾಸರಗೋಡು : ಸಾಹಿತ್ಯ, ಸಮಾಜಸೇವೆ ಹಾಗೂ ಸಂಘಟನಾ ಕ್ಷೇತ್ರದಲ್ಲಿನ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ, ದಕ್ಷಿಣ ಗೋವಾ ಕನ್ನಡ ಸಾಹಿತ್ಯ ಪರಿಷತ್ (ಕ.ಸಾ.ಪ.) ಅಧ್ಯಕ್ಷ ಶ್ರೀ ಬಸವರಾಜ್ ಬನ್ನಿಕೊಪ್ಪ ಅವರಿಗೆ ‘ಕನ್ನಡ ಪಯಸ್ವಿನಿ’ ಅಂತರ್ ರಾಜ್ಯ ಪ್ರಶಸ್ತಿ-2026 ಪ್ರದಾನ ಮಾಡಲಾಗುತ್ತಿದೆ.

ಮೂಲತಃ ಕೊಪ್ಪಳ ಜಿಲ್ಲೆಯವರಾದ ಬಸವರಾಜ್ ಬನ್ನಿಕೊಪ್ಪ ಅವರು ಸಾಹಿತ್ಯ, ಸಮಾಜಸೇವೆ ಹಾಗೂ ಕನ್ನಡದ ಸಂಘಟನಾ ಚಟುವಟಿಕೆಗಳಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ, ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಯಾದ ಕನ್ನಡ ಭವನ ಮತ್ತು ಗ್ರಂಥಾಲಯ ಈ ಗೌರವವನ್ನು ಘೋಷಿಸಿದೆ.

ಜುಲೈ 26ರಂದು ಕನ್ನಡ ಭವನದ ‘ರಜತ ಸಂಭ್ರಮ’ ಸಮಾರೋಪ ಕಾರ್ಯಕ್ರಮ ಅಂಗವಾಗಿ ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!