ಕಾಸರಗೋಡು, ಜು.15:* ತಳಕಲ್ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು, ಸಾಹಿತಿ ಹಾಗೂ ಕೃತಿಕರ್ತರಾದ ಡಾ. ಪಕ್ಕೀರಪ್ಪ ವಜ್ರಬಂಡಿ ಅವರಿಗೆ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಪ್ರದಾನ ಮಾಡಲಾಗುತ್ತಿದೆ.

ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ” ಹಾಗೂ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಸಾಹಿತ್ಯ, ಶಿಕ್ಷಣ ಹಾಗೂ ಕನ್ನಡ ನಾಡು-ನುಡಿ ಸೇವೆಯಲ್ಲಿ ಡಾ. ಪಕ್ಕೀರಪ್ಪ ವಜ್ರಬಂಡಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

