ಕಾಸರಗೋಡಿನಲ್ಲಿ ಭೀಕರ ಕಾರು ಅಪಘಾತ – ಏರ್‌ಬ್ಯಾಗ್‌ಗಳಿಂದ ಪ್ರಯಾಣಿಕರ ಜೀವ ಉಳಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾಸರಗೋಡಿನಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ನಿಯಂತ್ರಣ ತಪ್ಪಿ ಮೊದಲು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಲವು ಬಾರಿ ಉರುಳಿ ರಸ್ತೆಯ ಬದಿಯಲ್ಲಿ ನಿಂತಿದೆ.

ಅಪಘಾತದ ತೀವ್ರತೆ ಭಾರೀ ಆಗಿದ್ದರೂ, ಕಾರಿನಲ್ಲಿದ್ದ ಏರ್‌ಬ್ಯಾಗ್‌ಗಳು ಕ್ಷಣಾರ್ಧದಲ್ಲಿ ತೆರೆದುಕೊಂಡ ಪರಿಣಾಮ ಒಳಗಿದ್ದ ಪ್ರಯಾಣಿಕರು ಗಂಭೀರ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ಭೀಕರತೆ ಮತ್ತು ಏರ್‌ಬ್ಯಾಗ್‌ಗಳ ಮಹತ್ವವನ್ನು ಮತ್ತೊಮ್ಮೆ ಮನದಟ್ಟು ಮಾಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!