ಮಸೀದಿಯ ಕಾಣಿಕೆ ಹುಂಡಿ ಕಳ್ಳತನ : ಆರೋಪಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾಸರಗೋಡು : ​ಹೊಸದುರ್ಗದ ಕೋಟಚ್ಚೇರಿ ಟ್ರಾಫಿಕ್ ಸರ್ಕಲ್ ಸಮೀಪವಿರುವ ಬದ್ರಿಯಾ ಮಸೀದಿಯಲ್ಲಿ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಸೀದಿಯಲ್ಲಿ ಇರಿಸಲಾಗಿದ್ದ ಕಾಣಿಕೆ ಹುಂಡಿಯನ್ನು ದುಷ್ಕರ್ಮಿಯೊಬ್ಬ ಕೆಡವಿ, ಅದಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾನೆ.

ಈ ಕೃತ್ಯದ ದೃಶ್ಯಗಳು ಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದ್ದು, ಇದರ ಆಧಾರದ ಮೇಲೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ವ್ಯಕ್ತಿಯ ದೃಶ್ಯವನ್ನು ಪೊಲೀಸರು ಇದೀಗ ಸಾರ್ವಜನಿಕವಾಗಿ ಬಿಡುಗಡೆ ಮಾಡಿದ್ದಾರೆ. ಈ ವ್ಯಕ್ತಿಯ ಕುರಿತು ಯಾವುದೇ ಸುಳಿವು ಅಥವಾ ಮಾಹಿತಿ ದೊರೆತರೆ, ತಕ್ಷಣವೇ ಸಮೀಪದ ಪೊಲೀಸ್ ಠಾಣೆಯನ್ನು ಅಥವಾ ಹೊಸದುರ್ಗ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಸಹಕರಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಲಾಗಿದೆ

SHARE
Loading spinner

Leave a Reply

Your email address will not be published. Required fields are marked *

error: Content is protected !!