ಮಂಜೇಶ್ವರ: ಕೆಎಸ್ಆರ್ಟಿಸಿ ಬಸ್ನಲ್ಲಿ
ಅನಧಿಕೃತವಾಗಿ ಸಾಗಾಟ ಮಾಡುತಿದ್ದ ಅರ್ಧ ಕಿಲೋ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಒಬ್ಬನನ್ನು ಸೆರೆ ಹಿಡಿಯಲಾಗಿದೆ.
ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಪ್ರಯಾಣಿಕನಾದ ರಾಜಸ್ಥಾನ ಮೂಲದ ಚೆಗನ್ಲಾಲ್ ಎಂಬಾತನಿಂದ
ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಜೇಶ್ವರ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ನಲ್ಲಿ ನಡೆಸಿದ ವಾಹನ ತಪಾಸಣೆಯ ಸಂದರ್ಭದಲ್ಲಿ ದಾಖಲೆಗಳಿಲ್ಲದೆ ಕಳ್ಳಸಾಗಣೆ ಮಾಡುತ್ತಿದ್ದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿರೀಕ್ಷಕ ಗಂಗಾಧರನ್, ಪ್ರಿವೆಂಟಿವ್ ಆಫೀಸರ್ ಎಂ.ವಿ. ಜಿಜಿನ್, ಗ್ರೇಸ್ ಪ್ರಿವೆಂಟಿವ್ ಆಫೀಸರ್ಸ್ ವಿಜಯನ್,
ಬಾಬುರಾಜ್ ಮತ್ತು ಸಿಇಒ ರಾಹುಲ್ ಮೊದಲಾದವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.