ನಿವೃತ್ತ ಎಸ್‌ಐ ಧನ್‌ರಾಜ್‌ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

​ಕಾಸರಗೋಡು: ಹಲವು ಪ್ರಕರಣಗಳ ತನಿಖೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ನಿವೃತ್ತ ಎಸ್‌ಐ ಧನ್‌ರಾಜ್‌ (65) ಅವರನ್ನು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಮಾಡಲಾಗಿದೆ.

ಕಣ್ಣೂರು ಮೂಲದ ಮುರಳೀಧರನ್ ಅವರ ಪುತ್ರರಾದ ಧನ್‌ರಾಜ್, ಕಾಸರಗೋಡಿನ ಪಾರಕ್ಕಟೆಯಲ್ಲಿ ಮನೆ ನಿರ್ಮಿಸಿ ವಾಸಿಸುತ್ತಿದ್ದರು.
​ಇಂದು (ಸೋಮವಾರ) ಬೆಳಗ್ಗೆ ಧನ್‌ರಾಜ್‌ ಅವರನ್ನು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಮಾಡಲಾಗಿದೆ.

ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

​ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಧನ್‌ರಾಜ್‌ ಉತ್ತಮ ತನಿಖಾಧಿಕಾರಿಯಾಗಿದ್ದರು.

ಕಾಸರಗೋಡು ಕ್ರೈಂ ಬ್ರಾಂಚ್ ಘಟಕದಿಂದ ನಿವೃತ್ತರಾದ ಬಳಿಕ ಚೆರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಆಫೀಸರ್‌ ಆಗಿ ಕೆಲಸ ಮಾಡುತ್ತಿದ್ದರು.

​ಆರೋಗ್ಯ ಸಮಸ್ಯೆಯ ಕಾರಣದಿಂದ ಎರಡು ತಿಂಗಳ ಹಿಂದೆ ಸದರಿ ಉದ್ಯೋಗದಿಂದ ಬಿಡುಡೆಗೊಂಡಿದ್ದರು.ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
​ಕಾಸರಗೋಡು ಟೌನ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!