ಕಾಸರಗೋಡು/ಕಣ್ಣೂರು: ಪೋಕ್ಸೊ ಪ್ರಕರಣದಲ್ಲಿ ಕಣ್ಣೂರು ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಸಾವನ್ನಪ್ಪಿದ್ದಾರೆ.ಕಣ್ಣೂರಿನ ಪೆರಿಂಗಲತ್ ಹೌಸ್ನ ಮೊಹಮ್ಮದ್ (66) ಸಾವನ್ನಪ್ಪಿದ ದುರ್ದೈವಿ.

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮೊಹಮ್ಮದ್ ಅವರಿಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹವಾಸ ಮತ್ತು 10,000 ರೂಪಾಯಿ ದಂಡ ವಿಧಿಸಿತ್ತು.

ಶಿಕ್ಷೆ ಅನುಭವಿಸುತ್ತಿರುವ ವೇಳೆ ಜುಲೈ 21 ರಂದು ಅನಾರೋಗ್ಯಕ್ಕೀಡಾದ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ.

