ಬದಿಯಡ್ಕ, ಜುಲೈ 30: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ಗುರು ಪೂರ್ಣಿಮಾ ದಿನವನ್ನು ಭಕ್ತಿಭಾವ ಹಾಗೂ ಶ್ರದ್ಧೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿ ರಶೀಕ್ ಅವರು ಗುರು ಪೂರ್ಣಿಮೆಯ ಮಹತ್ವ ಹಾಗೂ ಜೀವನದಲ್ಲಿ ಗುರುವಿನ ಪಾತ್ರದ ಕುರಿತು ವಿವರಿಸಿದರು. ಬಳಿಕ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಒಟ್ಟಾಗಿ ಗುರು ಸ್ತೋತ್ರ ಮತ್ತು ಭಜನೆಗಳನ್ನು ಭಕ್ತಿಭಾವದಿಂದ ಹಾಡಿದರು.

ಗುರುಗಳಿಗೆ ಆರತಿ ಬೆಳಗಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಗುರುವಿನ ಮಹತ್ವ ಮತ್ತು ಸಂದೇಶವನ್ನು ಸಾರುವ ಮನಮೋಹಕ ನೃತ್ಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ಶಾಂತಿ ಮಂತ್ರವನ್ನು ಪಠಿಸುವ ಮೂಲಕ ಗುರು ಪೂರ್ಣಿಮಾ ಆಚರಣೆಯನ್ನು ಸಂಪನ್ನಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಮಾನಸ ಹಾಗೂ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಆದ್ಯ ಅವರು ಕಾರ್ಯಕ್ರಮವನ್ನು ಸುಂದರವಾಗಿ ನಿರೂಪಿಸಿದರು.
ಗುರುವಿನ ಮಹತ್ವವನ್ನು ಸಾರುವ ಮೂಲಕ ವಿದ್ಯಾರ್ಥಿಗಳಲ್ಲಿ ಗುರುಭಕ್ತಿ, ಶ್ರದ್ಧೆ ಮತ್ತು ಸಂಸ್ಕಾರವನ್ನು ಬೆಳೆಸುವಲ್ಲಿ ಕಾರ್ಯಕ್ರಮವು ಅರ್ಥಪೂರ್ಣವಾಗಿತ್ತು.

