ಕಾಸರಗೋಡಿನ ಕನ್ನಡ ಭವನದಲ್ಲಿ ನಾಳೆ ‘ಭರವಸೆಯ ಬೆಳಕು’ ಪ್ರಶಸ್ತಿ ಪ್ರದಾನ; ಪ್ರತಿಭಾವಂತ ವಿದ್ಯಾರ್ಥಿಗಳು, ಶಿಕ್ಷಕರಿಗೆ ಗೌರವ

ಕಾಸರಗೋಡು:ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂದ್ಯಾ ರಾಣಿ ಟೀಚರ್ ಅವರ ಸಾರಥ್ಯದ ಗಡಿನಾಡಿನ ಹೆಮ್ಮೆಯ ಕನ್ನಡ ಸಂಸ್ಥೆಯಾದ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಹಾಗೂ ಕನ್ನಡ ಭವನ ಪ್ರಕಾಶನ ವತಿಯಿಂದ ‘ಭರವಸೆಯ ಬೆಳಕು – ಸ್ಟೂಡೆಂಟ್ ಅಚೀವ್‌ಮೆಂಟ್ ಅವಾರ್ಡ್ 2026’ ಮತ್ತು ‘ಭರವಸೆಯ ಶಿಕ್ಷಣ ರತ್ನ – ಟೀಚರ್ಸ್ ಅಚೀವ್‌ಮೆಂಟ್ ಅವಾರ್ಡ್’ ಪ್ರದಾನ ಸಮಾರಂಭವು ಆಗಸ್ಟ್ 2ರಂದು (ಭಾನುವಾರ) ಬೆಳಿಗ್ಗೆ 11 ಗಂಟೆಗೆ ಕಾಸರಗೋಡು ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿದೆ.

2025–26ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ರಾಮಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತದೆ. ಸಮಾಜಮುಖಿ ಸೇವೆ ಸಲ್ಲಿಸಿರುವ ಶಿಕ್ಷಕರಿಗೂ ‘ಭರವಸೆಯ ಶಿಕ್ಷಣ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕಾರ್ಯಕ್ರಮವನ್ನು ಕಾಸರಗೋಡು ಜಿಲ್ಲಾ ರಾಮರಾಜ ಕ್ಷತ್ರಿಯ ಸಮಾಜದ ಜಿಲ್ಲಾಧ್ಯಕ್ಷ ಪ್ರದೀಪ್ ಬೇಕಲ್ ಉದ್ಘಾಟಿಸಲಿದ್ದು, ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕನ್ನಡ ಭವನದ ನಿರ್ದೇಶಕ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಕಾಸರಗೋಡು ಉಪಸಂಘದ ಅಧ್ಯಕ್ಷ ವಿದ್ಯಾನಂದ ಹೂಡೆ, ಕೂಡ್ಲು ಉಪಸಂಘದ ಅಧ್ಯಕ್ಷ ಸತೀಶ್ ಕೆ., ಭಿಕ್ಷು ಸೇವಾ ಸಮಾಜದ ಸಂಚಾಲಕ ದಿನೇಶ್ ನಾಗರಕಟ್ಟೆ, ಕನ್ನಡ ಭವನದ ಕಾರ್ಯದರ್ಶಿ ರಾಜೇಶ್ ಕೋಟೆಕಣಿ, ಪ್ರಶಸ್ತಿ ಸಮಿತಿಯ ಸಂಚಾಲಕಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷೆ ರೇಖಾ ಸುದೇಶ್ ರಾವ್, ಪತ್ರಕರ್ತ ಗಿರೀಶ್ ಪಿ.ಎಂ., ಕಾರ್ಯದರ್ಶಿ ಪ್ರದೀಪ್ ನಾಯ್ಕ್, ನಗರಸಭಾ ಸದಸ್ಯೆಯರಾದ ಸುಧಾರಾಣಿ ಅನಂಗೂರ್, ದಿವ್ಯಾ ಸುಂದೀಪ್ ನಾಗರಕಟ್ಟೆ ಹಾಗೂ ಶ್ರುತಿ ವಿಕಾಸ್ ಕೋಟೆಕಣಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಗಾಯನ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕನ್ನಡ ಭವನದ ಹಿತೈಷಿ ಅನ್ವಿತಾ ಶೆಣೈ ಅವರಿಗೆ ‘ಕನ್ನಡ ಪಯಸ್ವಿನಿ ನಾದರತ್ನ ಅಚೀವ್‌ಮೆಂಟ್ ಅವಾರ್ಡ್ 2026’ ನೀಡಿ ಗೌರವಿಸಲಾಗುವುದು.

ಕನ್ನಡ ಭವನ ಪ್ರಕಾಶನ ಮುಖ್ಯಸ್ಥೆ ಸಂದ್ಯಾ ರಾಣಿ ಟೀಚರ್ ಸ್ವಾಗತಿಸಲಿದ್ದು, ಪ್ರಧಾನ ಕಾರ್ಯದರ್ಶಿ ವಸಂತ್ ಕೆರೆಮನೆ ವಂದನಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮ ನಿರ್ವಹಣೆಯನ್ನು ರೇಖಾ ಸುದೇಶ್ ರಾವ್ ಹಾಗೂ ಗಿರೀಶ್ ಪಿ.ಎಂ. ನಡೆಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡಾಭಿಮಾನಿಗಳು ಹಾಗೂ ಕನ್ನಡ ಭವನದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂದ್ಯಾ ರಾಣಿ ಟೀಚರ್ ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!