ಸೋಂಕಾಲಿನಲ್ಲಿ ಅಬೂಬಕ್ಕರ್ ಸಿದ್ದಿಕ್ ಹುತಾತ್ಮ ದಿನಾಚರಣೆ

ಉಪ್ಪಳ, ಆ. 6: ಡಿವೈಎಫ್‌ಐ ಕಾರ್ಯಕರ್ತ ಅಬೂಬಕ್ಕರ್ ಸಿದ್ದಿಕ್ ಅವರ ಹುತಾತ್ಮ ದಿನಾಚರಣೆಯನ್ನು ಸೋಂಕಾಲಿನಲ್ಲಿ ಗುರುವಾರ ಆಚರಿಸಲಾಯಿತು.
ಕಾರ್ಯಕ್ರಮವನ್ನು ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ರಜೀಶ್ ವೆಲ್ಲಾಟ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಅಬೂಬಕ್ಕರ್ ಸಿದ್ದಿಕ್ ಅವರ ಹೋರಾಟದ ಆದರ್ಶಗಳು ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಅವರ ತ್ಯಾಗವನ್ನು ಸದಾ ಸ್ಮರಿಸಬೇಕಾಗಿದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಬೀರ್ ವಹಿಸಿದ್ದರು. ಈ ಸಂದರ್ಭದಲ್ಲಿ ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ಎಂ.ವಿ. ರತೀಶ್, ಜಿಲ್ಲಾ ಜಂಟಿ ಕಾರ್ಯದರ್ಶಿ ಸಾದಿಕ್ ಚೆರುಗೋಳಿ, ಜಿಲ್ಲಾ ಉಪಾಧ್ಯಕ್ಷ ನಸೀರುದ್ದೀನ್ ಮಲಂಗರೆ ಹಾಗೂ ಬೇಬಿ ಶೆಟ್ಟಿ ಮಾತನಾಡಿದರು.
7 ವರ್ಷದ ಹಿಂದೆ ಆರ್‌ಎಸ್‌ಎಸ್‌ ಕಾರ್ಯಕರ್ತರಿಂದ ಹತ್ಯೆಯಾದ ಅಬೂಬಕ್ಕರ್ ಸಿದ್ದಿಕ್ ಅವರ ನೆನಪು ಡಿವೈಎಫ್‌ಐ ಕಾರ್ಯಕರ್ತರಲ್ಲಿ ಸದಾ
ಹಚ್ಚಾಗಿ ಉಳಿದಿರುವ ನೆನಪಾಗಿದೆ


ಬ್ಲಾಕ್ ಕಾರ್ಯದರ್ಶಿ ವಿನಯ್ ಕುಮಾರ್ ಬಾಯಾರ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಸ್ಥಳೀಯ ಡಿವೈಎಫ್‌ಐ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!