ಪೆರ್ಲದಲ್ಲಿ RSS ವಿರುದ್ಧ CPIM ಸಾರ್ವಜನಿಕ ಸಭೆ

ಪೆರ್ಲ: RSS ದೇವಸ್ಥಾನಗಳನ್ನು ಕೊಳ್ಳೆ ಹೊಡೆಯುತ್ತಿದೆ ಹಾಗೂ ಕೊಲೆ ಬೆದರಿಕೆಯ ಭಾಷಣಗಳನ್ನು ಮಾಡುತ್ತಿದೆ ಎಂದು ಆರೋಪಿಸಿ CPIM ಕುಂಬಳ ಏರಿಯಾ ಸಮಿತಿಯ ನೇತೃತ್ವದಲ್ಲಿ ಪೆರ್ಲದಲ್ಲಿ ಸಾರ್ವಜನಿಕ ಸಭೆ ನಡೆಯಿತು.

CPIM ಜಿಲ್ಲಾ ಕಾರ್ಯದರ್ಶಿ ಎಂ. ರಾಜಗೋಪಾಲನ್ ಸಭೆಯನ್ನು ಉದ್ಘಾಟಿಸಿದರು. ಏರಿಯಾ ಸಮಿತಿ ಸದಸ್ಯ ನಾಸಿರುದ್ದೀನ್ ಮಲಂಕರ ಸ್ವಾಗತಿಸಿದರು. ಲೋಕಲ್ ಕಾರ್ಯದರ್ಶಿ ವಿನೋದ್ ವಿ. ಅಧ್ಯಕ್ಷತೆ ವಹಿಸಿದ್ದರು.

ಏರಿಯಾ ಕಾರ್ಯದರ್ಶಿ ಸಿ.ಎ. ಸುಬೈರ್ ಹಾಗೂ ಏರಿಯಾ ಸಮಿತಿ ಸದಸ್ಯ ವಿಟ್ಟಲ್ ರೈ ಎಂ. ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ RSS ವಿರುದ್ಧ ವಿವಿಧ ಆರೋಪಗಳನ್ನು ಮಾಡಲಾಗಿದ್ದು, ಈ ಕುರಿತು CPIM ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!