ಉಪ್ಪಳ ಪಚ್ಚಿಲಂಪಾರೆಯ 41ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪ್ಪಳ: 41ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಉಮಾ ಭಗವತಿ ಭಜನಾ ಮಂದಿರದ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು.

ಅರ್ಚಕರಾದ ಶ್ರೀ ರಾಮಚಂದ್ರ ಐತಾಲ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊಸರು ಕುಡಿಕೆ ಉತ್ಸವದ ಪದಾಧಿಕಾರಿಗಳು ಹಾಗೂ ಮಂದಿರದ ಸದಸ್ಯರು ಉಪಸ್ಥಿತರಿದ್ದರು. ಉತ್ಸವದ ಯಶಸ್ವಿ ಆಯೋಜನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಸಾಂಪ್ರದಾಯಿಕ ವೈಭವದೊಂದಿಗೆ ನಡೆಯಲಿರುವ 41ನೇ ವರ್ಷದ ಮೊಸರು ಕುಡಿಕೆ ಉತ್ಸವದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!