ಮಂಜೇಶ್ವರ: ಮಂಜೇಶ್ವರ ಒಳಪೇಟೆ ರೈಲ್ವೆ ನಿಲ್ದಾಣದ ಆವರಣದಲ್ಲಿ ಆಟೋ ಚಾಲಕರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಘದ ಅಧ್ಯಕ್ಷರಾದ ಗೋವಿಂದ ಭಟ್ ಅವರು ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷರಾದ ಹನೀಫ್ ಹಾಗೂ ಧರ್ಮರಾಜ್ ಅವರು ಸ್ವಾತಂತ್ರ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಫೈಝಲ್ ಅವರು ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಜಯಪ್ರಕಾಶ್ ಅವರು ವಂದಿಸಿದರು. ಕೋಶಾಧಿಕಾರಿ ಶೇಫಿಕ್ ಅವರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಂಘದ ಎಲ್ಲಾ ಆಟೋ ಚಾಲಕ ಸದಸ್ಯರು ಸಮವಸ್ತ್ರವಾದ ಖಾಕಿ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದ ಬಳಿಕ ಮಂಜೇಶ್ವರ ಪೇಟೆಯಲ್ಲಿ ಸಾರ್ವಜನಿಕರಿಗೆ ಹಾಗೂ ಸದಸ್ಯರಿಗೆ ಸಿಹಿತಿಂಡಿ ಹಂಚಲಾಯಿತು.

